August 5, 2025
Vinay-Gowda-Rajath-kishan

ಬೆಂಗಳೂರು: ಬಿಗ್ ಬಾಸ್ ಸೀಸನ್ 11ರ ಸ್ಪರ್ಧಿಗಳಾದ ವಿನಯ್ ಗೌಡ ಮತ್ತು ರಜತ್ ವಿರುದ್ಧ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ನಟ ವಿನಯ್ ಗೌಡ ಮತ್ತು ರಜತ್ ಕಿಶನ್ ಒಟ್ಟಾಗಿ ಚಿತ್ರೀಕರಿಸಿದ ಒಂದು ರೀಲ್ಸ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ, ವಿನಯ್ ಗೌಡ ಲಾಂಗು ಧರಿಸಿ, ಕೂಲಿಂಗ್ ಗ್ಲಾಸ್ ಹಾಕಿಕೊಂಡು, ದರ್ಶನ್ ಅವರ ‘ಕರಿಯ’ ಸಿನಿಮಾದ ಶೈಲಿಯಲ್ಲಿ ಸ್ಲೋ ಮೋಷನ್‌ನಲ್ಲಿ ನಡೆಯುತ್ತಿರುವುದು ಕಂಡುಬರುತ್ತದೆ.

ಬಸವೇಶ್ವರ ನಗರದಲ್ಲಿ ಸಾರ್ವಜನಿಕವಾಗಿ ಲಾಂಗು ಹಿಡಿದು, ಭಯದ ವಾತಾವರಣ ಸೃಷ್ಟಿಸುವ ರೀತಿಯ ರೀಲ್ಸ್ ಮಾಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಈ ರೀಲ್ಸ್ ಅನ್ನು ‘ಬುಜ್ಜಿ’ ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಲಾಗಿದೆ.

ಈ ವಿಚಾರ ಗಮನಿಸಿದ ಬಸವೇಶ್ವರ ನಗರ ಪೊಲೀಸರು, ಇಬ್ಬರ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಕೇಸ್ ದಾಖಲಿಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರಗಳನ್ನು ಪ್ರದರ್ಶಿಸಿ ಭಯೋತ್ಪಾದಕ ವಾತಾವರಣ ಸೃಷ್ಟಿಸುವುದು ಕಾನೂನುಬಾಹಿರವಾಗಿದೆ. ಈ ಹಿನ್ನೆಲೆಯಲ್ಲಿ ಇಬ್ಬರು ಸ್ಪರ್ಧಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

error: Content is protected !!