
ಭಾರೀ ಮಳೆಯ ಪರಿಣಾಮವಾಗಿ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು (ಮೇ 30, 2025) ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿಯೂ ಮಹಾಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ, ಅಂಗನವಾಡಿ ಕೇಂದ್ರಗಳು ಮತ್ತು 1ರಿಂದ 10ನೇ ತರಗತಿವರೆಗೆ ಎಲ್ಲಾ ಶಾಲೆಗಳಿಗೆ ಮೇ 30, 2025 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಕೆ. ಆದೇಶ ಜಾರಿಗೊಳಿಸಿದ್ದಾರೆ.
ತೀವ್ರ ಮಳೆಯ ನಡುವೆಯೂ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ಮಾತ್ರ ನಿಯಮಿತವಾಗಿ ನಡೆಯಲಿವೆ ಎಂಬುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.