
ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಪಡುಪಣಂಬೂರು ಶನಿ ಮಂದಿರದ ಎದುರು ಭಾಗದಲ್ಲಿ ಕಾರು ಒಂದು ಸ್ಕೂಟರ್ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಸ್ಕೂಟರ್ ಸವಾರ ಪ್ರಾಣಾಪಾಯದಿಂದ ಪಾರಾಗಿ ಅಲ್ಪ ಸ್ವಲ್ಪ ಗಾಯಗಳೊಂದಿಗೆ ಬದುಕುಳಿದಿದ್ದಾರೆ.
ಗಾಯಗೊಂಡ ವ್ಯಕ್ತಿಯನ್ನು ರಾಜಸ್ಥಾನ ಮೂಲದ 32 ವರ್ಷದ ರಾಗಾರಾಮ್ ಎಂದು ಗುರುತಿಸಲಾಗಿದೆ.
ಉಡುಪಿಯಿಂದ ಮಂಗಳೂರಿನತ್ತ ಹೋಗುತ್ತಿದ್ದ ಕಾರು ಪಡುಪಣಂಬೂರು ಪ್ರದೇಶವನ್ನು ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ, ಮುಂದಿನ ದಿಕ್ಕಿನಲ್ಲಿ ಹೋಗುತ್ತಿದ್ದ ಸ್ಕೂಟರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಿಂದ ಸ್ಕೂಟರ್ ಸಂಪೂರ್ಣ ನಾಶವಾಗಿದ್ದು, ಕಾರು ಹೆದ್ದಾರಿಯ ಮೇಲೆ ಒಂದು ಸುತ್ತು ತಿರುಗಿ ನಿಂತಿದೆ.
ಸ್ಥಳೀಯರು ತಕ್ಷಣವೇ ಧಾವಿಸಿ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ದು ಸಹಾಯ ಮಾಡಿದ್ದಾರೆ.
ಅಪಘಾತದ ಪರಿಣಾಮ ಕೆಲಕಾಲ ಹೆದ್ದಾರಿಯ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಘಟನೆಯ ಬಳಿಕ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರು ಚಾಲಕ ಸಂತೋಷ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.