
ಇಸ್ಲಾಮಾಬಾದ್: ಭಾರತದ ವಿರುದ್ಧ ಯುದ್ಧದ ಬೆದರಿಕೆ ನೀಡುತ್ತಿರುವ ಪಾಕಿಸ್ತಾನಕ್ಕೆ ಅಲ್ಲಿನದೇ ಸೈನಿಕರು ಶಾಕ್ ನೀಡುತ್ತಿದ್ದಾರೆ. ಬಹುತೇಕ ಸೈನಿಕರು ಮತ್ತು ಸೇನಾ ಅಧಿಕಾರಿಗಳು ರಾಜೀನಾಮೆ ಸಲ್ಲಿಸುತ್ತಿದ್ದಾರೆ ಎಂಬ ವರದಿಗಳು ಹೊರಬಿದ್ದಿವೆ.
ಕೇವಲ ಎರಡು ದಿನಗಳ ಅವಧಿಯಲ್ಲಿ ಸುಮಾರು 5,000 ಪಾಕಿಸ್ತಾನಿ ಸೈನಿಕರು ಹಾಗೂ ಅಧಿಕಾರಿಗಳು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ. ಭಾರತವು ಶೀಘ್ರದಲ್ಲೇ ಬಲವಾದ ಸೇನಾ ಕಾರ್ಯಾಚರಣೆ ಆರಂಭಿಸಬಹುದೆಂಬ ಆತಂಕದಿಂದ ಸೈನಿಕರ ಕುಟುಂಬಗಳು ರಾಜೀನಾಮೆ ನೀಡಲು ಒತ್ತಾಯಿಸುತ್ತಿವೆ.
ಹೆಚ್ಚಿನ ಸಂಖ್ಯೆಯ ಸೈನಿಕರು ತಮ್ಮ ಸ್ವಯಂರಕ್ಷಣೆಗಾಗಿ ಕರ್ತವ್ಯದಿಂದ ಹಿಂದೆ ಸರಿಯುತ್ತಿದ್ದಾರೆ. ಈಗಾಗಲೇ ಕೆಲವರು ರಾಜೀನಾಮೆ ಸಲ್ಲಿಸಿರುವುದರಿಂದ ಮುಂದಿನ ದಿನಗಳಲ್ಲಿ ಈ ಸಂಖ್ಯೆ ಇನ್ನೂ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಮೂಲಗಳು ಹೇಳಿವೆ.
ರಾಜೀನಾಮೆಗಳ ಪ್ರಮಾಣ ಏರಿಕೆಯಾಗುತ್ತಿದ್ದಂತೆ ಪಾಕಿಸ್ತಾನ ಸೇನೆ ಎಚ್ಚರಿಕೆಯ ಸೂಚನೆ ನೀಡಿದ್ದು, ಸೇನೆಯ ನಿಯಮಗಳನ್ನು ಉಲ್ಲಂಘಿಸಿದರೆ ಪಾಕಿಸ್ತಾನ ಸೇನಾ ಕಾಯ್ದೆ (1952) ಅಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿರುವ ಆದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
