
ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನ ಹಡಗಲಿ ರಾಜ್ಯದ 30 ಜಿಲ್ಲೆಗಳಲ್ಲಿ ಜಿಲ್ಲಾ ಘಟಕಗಳನ್ನು ಸ್ಥಾಪಿಸಿ, ಜಿಲ್ಲಾ ಅಧ್ಯಕ್ಷರನ್ನು ನೇಮಿಸಿದೆ. ಈ ಸಂಘವು ಪ್ರತಿವರ್ಷ ಕನ್ನಡ ನುಡಿ ವೈಭವ ಸೇರಿದಂತೆ ಹಲವಾರು ಸಾಂಸ್ಕೃತಿಕ ಹಾಗೂ ಸಾಹಿತ್ಯಿಕ ಕಾರ್ಯಕ್ರಮಗಳನ್ನು ಆಯೋಜಿಸಿ, ಕನ್ನಡ ಭಾಷೆ ಮತ್ತು ಸಂಸ್ಕೃತಿಗೆ ಶ್ರದ್ದಾಂಜಲಿ ಅರ್ಪಿಸುತ್ತಿದೆ.
ಮಾರ್ಚ್ 16 ರಂದು ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಮಾರಂಭದಲ್ಲಿ ರಾಜ್ಯದ ನಾನಾ ಜಿಲ್ಲೆಗಳಿಂದ ಸಾಹಿತ್ಯ, ಶಿಕ್ಷಣ, ಗಾಯನ, ಸೇವಾ ಮತ್ತು ಕಾವ್ಯ ಕ್ಷೇತ್ರಗಳಲ್ಲಿ ಮಹತ್ವದ ಸಾಧನೆ ಮಾಡಿದ ಗಣ್ಯರನ್ನು ಗೌರವಿಸಲಾಯಿತು.
ಸುಮಾರು 200 ಸಾಧಕರಿಗೆ ಸನ್ಮಾನ ನೀಡಲಾಗಿದ್ದು, ಐದು ಮಹತ್ವದ ಕೃತಿಗಳನ್ನು ರಾಜ್ಯಧ್ಯಕ್ಷ ಮಧು ನಾಯ್ಕ ಲಂಬಾಣಿ ಅವರು ಲೋಕಾರ್ಪಣೆ ಮಾಡಿದರು. ಹಿರಿಯ ಸಾಹಿತಿ ಡಾ. ಹಸೀನ ಅವರು ಕವಿತಾ ಪಠಣದ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಮಾರಂಭದ ಅಧ್ಯಕ್ಷತೆಯನ್ನು ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ರಾಮು ಎನ್. ರಾಥೋಡ್ ವಹಿಸಿದ್ದರು. ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಹಡಪದ ಅವರು ನೆರವೇರಿಸಿದರು.